SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ; 15ರಿಂದ ಮೌಲ್ಯಮಾಪನ!

Share the Article

SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

ಏ.11ರಿಂದ ಕೋಡಿಂಗ್ ಹಾಗೂ ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿಣಡಿಯ ಮಂಡಳಿ ಮಾ.21ರಿಂದ ಆರಂಭಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.4ಕ್ಕೆ ಮುಕ್ತಾಯಗೊಂಡಿವೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಆರು ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಈ ಬಾರಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.