Bengaluru: ಬೆಂಗಳೂರು: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ: ಫೋನ್ ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ

Bengaluru: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬ್ಯಾಡ್ಮಿಂಟನ್‌ ತರಬೇತುದಾರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಬ್ಯಾಡ್ಮಿಂಟನ್ ಕೋಚ್‌ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ.

ಬಾಲಕಿ ರಜೆಯಲ್ಲಿ ಅಜ್ಜಿ ಮನೆಗೆ ಬಂದಾಗ ಮೊಬೈಲ್ ನಿಂದ ತನ್ನ ನಗ್ನ ಪೋಟೋವನ್ನು ಸುರೇಶ್‌ಗೆ ಶೇ‌ರ್ ಮಾಡಿದ್ದಾಳೆ. ಬಳಿಕ ಅಜ್ಜಿ ಮೊಬೈಲ್‌ ನೋಡಿದಾಗ ಕೋಚ್‌ಗೆ ನಗ್ನ ಫೋಟೋ ಕಳುಹಿಸಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಅಜ್ಜಿ ಶಾಕ್ ಆಗಿದ್ದಾಳೆ. ಬಾಲಕಿ ತನ್ನ ನಗ್ನ ಫೋಟೋವನ್ನು ಕೋಚ್‌ಗೆ ಕಳುಹಿಸಿರುವುದನ್ನು ಕಂಡು ಬೆಚ್ಚಿಬಿದ್ದಿರುವ ಅಜ್ಜಿ ಕೂಡಲೇ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಗ ಬಾಲಕಿಯನ್ನ ವಿಚಾರಿಸಿದಾಗ ಕೋಚ್ ಸುರೇಶನ ಕಾಮದಾಟ ಬಟಾಬಯಲಾಗಿದೆ.

ಬಳಿಕ ಪೋಷಕರು ಕೋಚ್ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಮೊಬೈಲ್ ಪರಿಶೀಲನೆ ಮಾಡಿದಾಗ ಕ್ರೀಡಾ ತರಬೇತಿ ಕೇಂದ್ರದಲ್ಲಿ ಹಲವು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿರುವುದು ಕಂಡುಬಂದಿದೆ.

Comments are closed.