Hubballi: ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು!

Hubballi: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ವರೂರು ಗ್ರಾಮದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು. ಕಾರ್‌ನಲ್ಲಿ ಮೂವರು ಮಹಿಳೆಯರಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಮೃತರು.

ಕಾರಿನಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments are closed.