Anganawadi: ಅಂಗನವಾಡಿ ಕೇಂದ್ರಗಳ ಸಮಯದಲ್ಲಿ ಬದಲಾವಣೆ!

Anganawadi: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ ಇತರೆ ಸೇವೆಗಳಿಗೆ ತೊಂದರೆಯಾಗದಂತೆ ಸಮಯ ಬದಲಾವಣೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ.

ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ, ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ನಿಗದಿಪಡಿಸಲಾಗಿದೆ.

Comments are closed.