ನಳಿನ್ ಕಟೀಲ್‌ಗೆ ರಾಜಕೀಯ ಸ್ಥಾನಮಾನ ಸಿಗಲಿ: ಮಧೂರು ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ

Share the Article

Mangalore : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದರು.

ಈ ವೇಳೆ ನಳಿನ್ ಪರ ಡಿಕೆಶಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ. ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು.

Comments are closed.