B.Y Vijayendra: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ: ಬಿ.ವೈ.ವಿಜಯೇಂದ್ರ ಮುಂದುವರಿಕೆ ಸಾಧ್ಯತೆ

B.Y Vijayendra: ಬಿಜೆಪಿ(BJP)ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ(B S Yadiyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕರ್ನಾಟಕದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವಿವಿಧ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಹೈಕಮಾಂಡ್(High command) ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಈ ವರದಿ ಬಂದಿದೆ. ಏತನ್ಮಧ್ಯೆ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಾಧ್ಯಕ್ಷರನ್ನು ಬಿಜೆಪಿ ಹೈಕಮಾಂಡ್ ಬದಲಿಸಲಿದೆ ಎಂದು ವರದಿ ಹೇಳಿದೆ.

ಈ ರಾಜ್ಯಗಳ ಅಧ್ಯಕ್ಷರ ಬದಲಾವಣೆ ಆದ ಮೇಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಬಗ್ಗೆ ಗಮನ ಹರಿಸಲಿದೆ. ಹಾಗಾಗಿ ಸದ್ಯದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಆಗಲಿದೆ ಎನ್ನಲಾಗಿತ್ತು. ಆದರೆ ಈಗ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Comments are closed.