POCSO: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕ!

Kalburgi: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕನನ್ನು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಮುಕ ಅತಿಥಿ ಶಿಕ್ಷಕ ಶಿವರಾಜ್‌ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಂಡವಾಳ ಮಾಡಿಕೊಂಡ ಆರೋಪಿ ಶಿಕ್ಷಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ.

ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧನ ಮಾಡಿ ಪೋಕ್ಸೋ ಕೇಸು ದಾಖಲು ಮಾಡಿಕೊಂಡಿದ್ದಾರೆ.

Comments are closed.