Yadagiri : ‘ನರೇಗಾ ಯೋಜನೆ’ಯ ಕೂಲಿ ದುಡ್ದು ಲಪಟಾಯಿಸಲು ಗಂಡಸರಿಗೆ ಸೀರೆ ಉಡಿಸಿ ಸಿಕ್ಕಿಬಿದ್ದ ಅಸಾಮಿ !!

Yadagiri: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಹಣವನ್ನು ಕೊಳ್ಳೆ ಹೊಡೆಯುವ ಉದ್ದೇಶದಿಂದ ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಂತಹವಿಚಿತ್ರ ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.
ಯಾದಗಿರಿ ಜಿಲ್ಲೆಯ ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ ಹೊಲದಲ್ಲಿ ಮೂರು ಲಕ್ಷ ರುಪಾಯಿಗಳ ನಾಲಾ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಗಂಡಸರಿಗೆ ಸೀರೆ ಉಡಿಸಿ, ಹೆಂಗಸರ ಲೆಕ್ಕದಲ್ಲಿ ಹಣ ಲಪಟಾಯಿಸುವ ಸಂಚು ನಡೆದಿರುವ ಬಗ್ಗೆ ವಾರದಿಯಾಗಿದೆ. ಈ ಕುರಿತ ಭಾವಚಿತ್ರಗಳು ಸಾಮಾಜಿಕ ಜಾಲತಾಣ-ಮಾಧ್ಯಮಗಳಲ್ಲಿ ಸೋಮವಾರ ಭಾರಿ ಸಂಚಲನ ಮೂಡಿಸಿದೆ.
ಅಂದಹಾಗೆ ನಾಲ್ವರು ಪುರುಷರಿಗೆ ಸೀರೆ ಉಡಿಸಿ, ಹೆಂಗಸರಂತೆ ಬಿಂಬಿಸಿ, ಕೂಲಿ ಹಣ ದುರ್ಬಳಕೆ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ಸಂಜೆ ವೇಳೆಗೆ ಸ್ಪಷ್ಟನೆ ನೀಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ (ಸಿಇಒ) ಲವೀಶ ಒರಡಿಯಾ ಅವರು ಫೆಬ್ರವರಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಆಗಲೇ ಬಂದ ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೀರೇಶ ಎಂಬ ಹೊರಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ. ನರೇಗಾ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.