Karanataka: ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್!

Share the Article

Karnataka: ಕರ್ನಾಟಕದಾದ್ಯಂತ (Karnataka) ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ತೀರ್ಮಾನಿಸಿದೆ.

ಇತ್ತೀಚೆಗಷ್ಟೇ ಕೆಎಸ್​ಆರ್​​ಟಿಸಿ ಬಸ್​ಗಳ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಖಾಸಗಿ ಬಸ್ ಸರದಿ. ರಾಜ್ಯದಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಪ್ರಕಟವಾಗುವ ಸಾಧ್ಯತೆ ಇದೆ.

ಪ್ರತಿ ಲೀಟರ್ ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರ ಕೂಡ ಹೆಚ್ಚಾಗಿದೆ. ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮ ಸ್ಥಗಿತಗೊಳ್ಳುತ್ತದೆ. ಪ್ರತಿ ಬಸ್​ ನಿರ್ವಹಣೆಗೆ ಸದ್ಯ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚು ಬರುತ್ತಿದೆ. ಹಾಗಾಗಿ ದರ ಏರಿಸುವುದು ಅನಿವಾರ್ಯ ಎಂದು ಬಸ್ ಮಾಲೀಕರ ಸಂಘದ ರಾಜ್ಯ ಪ್ರಮುಖರು ಹೇಳಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ ತಿಳಿಸಿದ್ದಾರೆ.

Comments are closed.