Singapura : ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ – ಡಿಸಿಎಂ ಪವನ್ ಕಲ್ಯಾಣ್ ಪುತ್ರ ಗಂಭೀರ!!

Singapura: ಸಿಂಗಾಪುರ ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರೀ ಅನಾಹುತ ಸಂಭವಿಸಿದೆ. ಇದೇ ಶಾಲೆಯಲ್ಲಿ ಓದುತ್ತಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಪತ್ರನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಹೌದು, ಟಾಲಿವುಡ್‌ನ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ ಕಿರಿಯ ಮಗನೂ ಕೂಡ ಇದೇ ಶಾಲೆಯಲ್ಲಿ ಓದುತ್ತಿದ್ದು, ಅವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಧ್ಯ ನಟನ ಪುತ್ರ ಮಾರ್ಕ್ ಶಂಕರ್ ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಕಿ ಅವಘಡದಲ್ಲಿ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪವನ್ ಕಲ್ಯಾಣ್ ಪುತ್ರನನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Comments are closed.