Academic Year : ಜೂನ್ ಬದಲು ಏಪ್ರಿಲ್ ನಲ್ಲೇ ಶಾಲಾ- ಕಾಲೇಜು ಆರಂಭ !! ರಾಜ್ಯ ಸರ್ಕಾರದಿಂದ ಹೊಸ ನಿರ್ಧಾರ

Share the Article

Academic Year: ಜೂನ್‌ನಲ್ಲಿ ಪ್ರಾರಂಭವಾಗಬೇಕಿದ್ದ ಶೈಕ್ಷಣಿಕ ವರ್ಷವನ್ನು ರಾಜ್ಯ ಸರ್ಕಾರವು ಏಪ್ರಿಲ್ ನಲ್ಲಿಯೇ ಆರಂಭಿಸಲು ತೀರ್ಮಾನಿಸಿದೆ. ಹೀಗಾಗಿ ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂದಹಾಗೆ ಇದು ನಮ್ಮ ಕರ್ನಾಟಕದಲ್ಲಿ ನಡೆದ ಬೆಳವಣಿಗೆ ಅಲ್ಲ. ಬದಲಿಗೆ ಗೋವಾ ಸರ್ಕಾರ ಜಾರಿಗೆ ತಂದಿರುವ ನಿಯಮ.

ಹೌದು, ಗೋವಾ ಸರಕಾರ ಎಪ್ರಿಲ್‌ನಿಂದಲೇ ಶಾಲಾ ಕಾಲೇಜುಗಳನ್ನು ಆರಂಭಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಲುವಾಗಿ ಗೋವಾ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6-12ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಶಾಲೆಗಳಿಗೆ ತೆರಳಿ ಹೊಸ ಕ್ರಮದ ಬಗ್ಗೆ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ.

“ಶೈಕ್ಷಣಿಕ ವರ್ಷ ಮುಂಚಿತವಾಗಿ ಪ್ರಾರಂಭಿಸಿದ್ದರೂ, ಬಹುತೇಕ ಶಾಲೆಗಳಲ್ಲಿ ಶೇ.90ರಷ್ಟು ಹಾಜರಾತಿ ದಾಖಲಾಗಿದೆ. ಶೇ.80ರಷ್ಟು ವಿದ್ಯಾರ್ಥಿಗಳು ಈ ಬಗ್ಗೆ ಸಂತುಷ್ಟರಾಗಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

Comments are closed.