Airport: 2024-25ರಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಿಂದ 41 ಮಿಲಿಯನ್ ಮಂದಿ ಪ್ರಯಾಣ

2024-25ನೇ ಸಾಲಿನಲ್ಲಿ ಬೆಂಗಳೂರಿನ(Bengaluru) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ((Kempe gowda International Airport) ) 41 ಮಿಲಿಯನ್ ಜನರು ಪ್ರಯಾಣಿಸಿದ್ದು, 5.02 ಲಕ್ಷ ಮೆಟ್ರಿಕ್ ಟನ್ ತೂಕದ ಸರಕು(Goods) ಸಾಗಿಸಲಾಗಿದೆ. 2023-24ರಲ್ಲಿ ಪ್ರಯಾಣಿಕರ(Passengers) ಸಂಖ್ಯೆ 37.53 ಮಿಲಿಯನ್ ಇತ್ತು. ಈ ವರ್ಷ ದೇಶೀಯ ಪ್ರಯಾಣಿಕರ ಸಂಖ್ಯೆ ಶೇ. 10ರಷ್ಟು ಬೆಳವಣಿಗೆ ಕಂಡಿದ್ದರೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 25ರಷ್ಟು ಹೆಚ್ಚಳವಾಗಿದೆ. 76 ದೇಶೀಯ ಹಾಗೂ 33 ಅಂತಾರಾಷ್ಟ್ರೀಯ ತಾಣಗಳಿಗೆ ಬೆಂಗಳೂರಿನಿಂದ ನೇರ ವಿಮಾನ ಸೇವೆ ಲಭ್ಯವಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದೆ. ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. 2024ರಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.11.6ರಷ್ಟು ಏರಿಕೆ ಕಂಡಿದ್ದು, 41.88 ದಶಲಕ್ಷಕ್ಕೆ ಏರಿದೆ. ಅಲ್ಲದೆ ದೇಶೀಯ ಪ್ರಯಾಣಿಕರ ಸಂಖ್ಯೆಯು ಶೇ.10ರಷ್ಟು ಏರಿಕೆಯಾಗಿ 36.05 ದಶಲಕ್ಷಕ್ಕೆ ತಲುಪಿದೆ. ಜೊತೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯು ಶೇ.25ರಷ್ಟು ಹೆಚ್ಚಳವಾಗಿ, 5.83 ದಶಲಕ್ಷಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಲು, ಇಂಡಿಗೋ ವಿಮಾನಯಾನ ಸಂಸ್ಥೆ ಜಾಗತಿಕ ಜಾಲವನ್ನು ವಿಸ್ತರಿಸಿರುವುದು ಪ್ರಮುಖ ಕಾರಣ. ಜೊತೆಗೆ, ಬೆಂಗಳೂರಿನಿಂದ ಲಂಡನ್ ಹೀಥ್ರೂಗೆ ದೈನಂದಿನ ಹೆಚ್ಚುವರಿ ವಿಮಾನ ಹಾರಾಟ, ಕ್ಯಾಥೆ ಪೆಸಿಫಿಕ್, ಕೆಎಲ್‌ಎಂ, ಜಪಾನ್ ಏರ್‌ಲೈನ್ಸ್, ಕ್ವಾಂಟಾಸ್ ಸೇರಿದಂತೆ ಹಲವು ವಿದೇಶಿ ವಿಮಾನಯಾನ ಸಂಸ್ಥೆಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒದಗಿಸುವ ವಿಮಾನ ಸೇವೆಯನ್ನು ಇನ್ನಷ್ಟು ಹೆಚ್ಚಿಸಿರುವುದು ಸಹ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯ ಹೆಚ್ಚಳಕ್ಕೆ ಕಾರಣವಾಗಿದೆ.
Comments are closed.