Chikamagalur: ಮಳೆ ಅವಾಂತರ, ಪ್ರಪಾತಕ್ಕೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್!

Chikamagalur: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಸುರಿದ ಮಳೆಯಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿರುವ ಘಟನೆ ನಡೆದಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಈ ಅವಘಡ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ 30 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಕೊಪ್ಪ ಮತ್ತು ಜಯಪುರ ಸರಕಾರಿ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲು ಮಾಡಲಾಗಿದೆ. ಪುಟ್ಟಪ್ಪ ಪೂಜಾರಿ ಅವರಿಗೆ ಸೇರಿದ ಮನೆಯ ಮೇಲೆ ಬಸ್ ಬಿದ್ದಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಬೆಂಗಳೂರು ಡಿಪೋಗೆ ಸೇರಿದ ಬಸ್ ಆಗಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Comments are closed.