Puttur: ದ್ವಿತೀಯ ಪಿಯುಸಿ ಫಲಿತಾಂಶ: ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ

Share the Article

Puttur: ನಗರದ ನಟ್ಟೋಜಾ ಫೌಂಡೇಶನ್‌ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ಅಜಿತ್‌ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ.

ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿಜ್ಞಾನ ವಿಭಾಗದಲ್ಲಿ 228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 127 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ ಬಪ್ಪಳಿಗೆಯ ವಿಜ್ಞಾನ ವಿಭಾಗದಲ್ಲಿ 177 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 75 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Comments are closed.