RBI: ಆರ್ ಬಿಐನಿಂದ ರೆಪೋ ದರ ಇಳಿಕೆ!

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ನಿನ್ನೆ ಮತ್ತು ಮೊನ್ನೆ ನಡೆದ ಆರ್ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಕಮಿಟಿ ನಿರ್ಧಾರಗಳನ್ನು ಪ್ರಕಟಿಸಿ, ರಿಪೋ ದರವನ್ನು.ಈಗಿರುವ ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದನ್ನು ತಿಳಿಸಿದರು. ಆರ್ಬಿಐನಿಂದ ಇದು ಸತತ ಎರಡನೇ ರಿಪೋ ದರ ಇಳಿಕೆ ಆಗಿದ್ದು, ಫೆಬ್ರವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ 25 ಮೂಲಾಂಕಗಳಷ್ಟು ಬಡ್ಡಿದರವನ್ನು ಇಳಿಸಲಾಗಿತ್ತು. ಈಗ ಮತ್ತೊಮ್ಮೆ ಕಡಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
Comments are closed.