P Chidambaram: ಬಿಸಿಲಿನ ತಾಪದಿಂದ ಮೂರ್ಛೆ ಹೋದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ!

P Chidambaram: ಸಬರಮತಿ ಆಶ್ರಮದಲ್ಲಿ ಪ್ರಾರ್ಥನಾ ಸಭೆಯಲ್ಲಿ ಪಿ.ಚಿದಂಬರಂ ಅವರು ಭಾಗವಹಿಸಿದ ಸಂದರ್ಭದಲ್ಲಿ ಬಿಸಿಲಿನ ತಾಪದಿಂದ ಹಿರಿಯ ಕಾಂಗ್ರೆಸ್ ನಾಯಕ ಮೂರ್ಛೆ ಹೋದ ಘಟನೆ ನಡೆದಿದೆ.
ಗುಜರಾತಿನ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ರಾಷ್ಟ್ರೀಯ ಅಧಿವೇಶನ ಇಂದು ನಡೆಯುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದರಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರಿಗೆ ಬಿಸಿಲಿನ ತಾಪ ತಟ್ಟಿ ಮೂರ್ಛೆ ಹೋಗಿದ್ದಾರೆ.
ಕೂಡಲೇ ಅಲ್ಲಿದ್ದ ಕಾಂಗ್ರೆಸ್ ಪಕ್ಷದವರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನುವ ವರದಿಯಾಗಿದೆ.
Comments are closed.