Gruhalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ – ಸದ್ಯಕ್ಕೆ ಹಣ ಪಾವತಿ ಸ್ಥಗಿತ !!

Share the Article

Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಅದರೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದ್ದು ಮಾರ್ಚ್ ತಿಂಗಳ ಹಣವನ್ನು ಸದ್ಯಕ್ಕೆ ಯಜಮಾನಿಯರ ಖಾತೆಗೆ ಜಮಾ ಮಾಡದಿರಲು ತೀರ್ಮಾನಿಸಿದೆ.

ರಾಜ್ಯಾಧ್ಯಂತ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಮಾತುಗಳು ಕೇಳಿ ಬರುತ್ತಿವೆ. ಹೌದು, ರಾಜ್ಯ ಸರ್ಕಾರ 16 ನೇ ಕಂತಿನ ಹಣವನ್ನ ಜನವರಿ ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕಳೆದ ಮೂರ್ನಾಲ್ಕು ಗೃಹ ಲಕ್ಷ್ಮಿ ಹಣ ಸರಿಯಾಗ ಖಾತಗೆ ಜಮಾ ಆಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ಅಸಮಾಧಾನವನ್ನ ಹೊರಹಾಕಿದ್ದು, ಮಾತು ಕೊಟ್ಟಂತೆ ಹಣವನ್ನ ಖಾತೆಗೆ ಹಾಕಿ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ನಂತರ ಸರ್ಕಾರ ಒಂದೊಂದೇ ತಿಂಗಳ ಹಣವನ್ನು ಖಾತೆಗೆ ಜಮಾ ಮಾಡಿತ್ತು. ಆದರೆ ಇದೀಗ ಮಾರ್ಚ್ ತಿಂಗಳ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಯಸ್, ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ, ಬಾಕಿ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ ಜಮಾ ಆಗೋದಿಲ್ಲ. ಯಾಕೆಂದರೆ ರಾಜ್ಯ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತಿದೆ.

ಈ ಹಿನ್ನಲೆಯಲ್ಲಿ ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ. ಹೀಗಾಗಿ ಸದ್ಯಕ್ಕೆ ಮಾರ್ಚ್ ಸೇರಿದಂತೆ ಬಾಕಿ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಂಡಂತೆ ಆಗಿದೆ.

Comments are closed.