Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ

Crime: ಮಾ. 31ರಂದು ಬೆಳುವಾಯಿಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಸಾಲ್ಯಾನ್ ಎಂಬಾತ 2-12-2024 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಅಂಬರೀಶ್ ಗುಹೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಲಿಗೆ ನಡೆಸಿರುವುದಾಗಿಯೂ ಈ ಸಂದರ್ಭದಲ್ಲಿ ಒಪ್ಪಿಕೊಂಡಿರುತ್ತಾನೆ.
ಈ ಬಗ್ಗೆ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಪ್ರಕರಣದಲ್ಲಿ ದಸ್ತಗಿರಿ ಮಾಡಿದ ಆರೋಪಿಯಿಂದ ಮೇಲೆ ನಮೂದಿಸಿದ ಪ್ರಕರಣದಲ್ಲಿ ಸುಲಿಗೆ ಮಾಡಿದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಕೆಂಪು ಬಣ್ಣದ KA 20 X 3393 ನೇ TVS Apache ಮೊಟಾರು ಸೈಕಲ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡಿರುವ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000/- ರೂ ಆಗಬಹುದು ಎಂದು ಅಂದಾಜಿಸಲಾಗಿದೆ.
Comments are closed.