Uppinangady : ಎಟಿಎಂ ಕಳ್ಳತನಕ್ಕೆ ಯತ್ನ- ಓರ್ವನ ಬಂಧನ

Uppinangady : ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿ ಎಟಿಎಂಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ.
ಹೌದು, ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಏಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು ಅಲ್ಲಿನ ಸಿಸಿ ಕ್ಯಾಮರಾ ವನ್ನು ಕಿತ್ತೆಗೆಯಲು ಯತ್ನಿಸಿ, ಎಟಿಎಂ ಮಷಿನ್ ಗೆ ಹಾನಿಯನ್ನುಂಟು ಮಾಡಿದ್ದಾರೆ.
ಈ ಬಗ್ಗೆ ಇಂಡಿಯಾ ವನ್ ಕಾಲ್ ಸೆಂಟರ್ ನಿಂದ ಕಲ್ಲೇರಿಯ ಎಟಿಎಂ ಕೇಂದ್ರದಲ್ಲಿ ಯಾವುದೋ ಅನುಚಿತ ಕೃತ್ಯ ನಡೆಯುತ್ತಿದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಳವು ಯತ್ನ ಪ್ರಕರಣ ನಡೆದಿರುವುದು ಕಂಡು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Comments are closed.