2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ- 2, 3 ಬರೆಯೋ ವಿದ್ಯಾರ್ಥಿಗಳಿಗೆ ಇಲ್ಲ ಶುಲ್ಕ, ಸಚಿವರಿಂದ ಘೋಷಣೆ

Share the Article

2nd PUC Exam: ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪರೀಕ್ಷೆ ಬರೆಯಲು ಅನಾನುಕೂಲ ಆದ ವಿದ್ಯಾರ್ಥಿಗಳಿಗೆ ಸರ್ಕಾರವು ಎರಡು ಮತ್ತು ಮೂರನೇ ಹಂತದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಇಂಥ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಎರಡು ಮತ್ತು ಮೂರನೇ ಪರೀಕ್ಷೆ ಬರೆಯಲು ಸಂಪೂರ್ಣ ಶುಲ್ಕ ವಿನಾಯಿತಿಯನ್ನು ಘೋಷಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ. ಪಿಯು ಪರೀಕ್ಷೆ – 2 ಏಪ್ರಿಲ್‌ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್‌ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್‌ 9 ರಿಂದ ಏಪ್ರಿಲ್‌ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದಾರೆ.

Comments are closed.