Shocking : ಶಾಲಾ ಅಟೆಂಡರ್ ನಿಂದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ – ಮಕ್ಕಳ ಗತಿ ಏನು ದೇವ್ರೇ?

Share the Article

Shocking : ಶಾಲೆಯೊಂದರಲ್ಲಿ ಅಟೆಂಡರ್ ಒಬ್ಬರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು ಅಘಾತವನ್ನು ಉಂಟುಮಾಡಿದೆ. ಈ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಗತಿ ಏನು ಎಂದು ಎಲ್ಲರೂ ಆತಂಕ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಶಾಲಾ ಸಹಾಯಕರೊಬ್ಬರು ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ಕಂಡುಬಂದಿದೆ. ಶಾಲಾ ಸಹಾಯಕನಾದ ಈತ ಶಿಕ್ಷಕನಲ್ಲದಿದ್ದರೂ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿದ್ದರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ. ಈ ವಿಷಯ ಬೆಳಕಿಗೆ ಬಂದ ನಂತರ ಜಿಲ್ಲಾ ಶಿಕ್ಷಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದು ಪ್ರಾಂಶುಪಾಲರನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಪ್ರಕರಣದಲ್ಲಿ ಇತರ ಶಿಕ್ಷಕರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಸ್ಥಳೀಯರು ಈ ಘಟನೆಯನ್ನು ಖಂಡಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿದ್ದಾರೆ. ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಕೆ. ಶರ್ಮಾ ಅವರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Comments are closed.