Bantwala : ದ್ವಿತೀಯ ಪಿಯುಸಿ ಫಲಿತಾಂಶ, ತಾಯಿ- ಮಗಳು ಇಬ್ಬರೂ ಪಾಸ್ !!

Share the Article

Bantwala : 2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಫಲಿತಾಂಶದಲ್ಲಿ ಹಲವಾರು ವಿಶೇಷತೆಗಳನ್ನು ನಾವು ಕಾಣಬಹುದು. ಅಂತೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಾಯಿ ಮಗಳು ಇಬ್ಬರೂ ಕೂಡ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ.

ಹೌದು, ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ತ್ರಿಶಾ ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 586 ಅಂಕಗಳನ್ನು ಪಡೆದಿದ್ದಾರೆ. ರವಿಕಲಾ ಅವರು ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದು ಪಾಸಾಗಿದ್ದರೆ.

ಅಂದಹಾಗೆ 1998 ರಲ್ಲಿ ಎಸೆಸೆಲ್ಸಿ ತೇರ್ಗಡೆಯಾಗಿದ್ದ ರವಿಕಲಾ, ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಹಲವು ವರ್ಷಗಳಿಂದ ನರಿಕೊಂಬಿನ ತಾರಿಪಡು ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭವಾಗುತ್ತದೆ. ಹೀಗಾಗಿ ಕಾರ್ಯಕರ್ತೆಯರು ಪಿಯುಸಿ ಉತ್ತೀರ್ಣರಾಗಿರಬೇಕು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದನ್ನೇ ಛಲವಾಗಿ ಸ್ವೀಕರಿಸಿದ ರವಿಕಲಾ, ಇದೀಗ ಎಸೆಸೆಲ್ಸಿ ಮುಗಿಸಿ ಬರೋಬ್ಬರಿ 27 ವರ್ಷಗಳ ಬಳಿಕ ಮೊದಲ ಪ್ರಯತ್ನದಲ್ಲೇ ಪಿಯುಸಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.

Comments are closed.