Bihar: ಅಕ್ರಮ ಸಂಬಂಧ ಆರೋಪ- ಕೇಂದ್ರ ಸಚಿವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ

Share the Article

Bihar: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳಾದ ಸುಷ್ಮಾ ದೇವಿ ಅವರನ್ನು ಅವರ ಪತಿಯೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬಿಹಾರದ ಗಯಾದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಅಕ್ರಮ ಸಂಬಂಧದ ಪ್ರಕರಣ ಎಂದು ಕೂಡ ಮೂಲಗಳು ತಿಳಿಸಿದೆ.

ವೃತ್ತಿಯಲ್ಲಿ ಚಾಲಕರಾಗಿರುವ ಸುಷ್ಮಾ ಅವರ ಪತಿ ರಮೇಶ್ ಮಂಗಳವಾರ ತಡರಾತ್ರಿ ಮನೆಗೆ ಆಗಮಿಸಿದ್ದು, ಈ ವೇಳೆ ಅವರ ಕೋಣೆಯಲ್ಲಿ ಯುವಕನೊಬ್ಬನನ್ನು ನೋಡಿ ಆಕ್ರೋಶಗೊಂಡಿದ್ದಾರೆ. ಪತಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಜಗಳ ಮಾಡಿದ್ದಾರೆ. ಈ ವೇಳೆ ಸುಷ್ಮಾ, ಪತಿ ರಮೇಶ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ.
ಕೆಲವು ನಿಮಿಷಗಳ ನಂತರ, ರಮೇಶ್ ದೇಶಿ ನಿರ್ಮಿತ ಪಿಸ್ತೂಲಿನಿಂದ ಸುಷ್ಮಾ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕೆಲವು ನಿಮಿಷಗಳ ನಂತರ, ರಮೇಶ್ ದೇಶಿ ನಿರ್ಮಿತ ಪಿಸ್ತೂಲಿನಿಂದ ಸುಷ್ಮಾ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡು, ಪ್ರಜ್ಞೆ ತಪ್ಪಿದ ಅವರನ್ನು ತಕ್ಷಣ ಗಯಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸುಷ್ಮಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಈ ಮಧ್ಯೆ ರಮೇಶ್ ಪಿಸ್ತೂಲ್ ಅನ್ನು ಕೋಣೆಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಇನ್ನು ಗಯಾ ಲೋಕಸಭಾ ಕ್ಷೇತ್ರದ ಸಂಸದರೂ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರೂ ಆಗಿರುವ ಜಿತಿನ್ ರಾಮ್ ಮಾಂಝಿ, ಈ ಘಟನೆಯ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರು ಬಿಹಾರದಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಮಿತ್ರಪಕ್ಷವಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಸೆಕ್ಯುಲರ್) ದ ಸಂಸ್ಥಾಪಕರೂ ಆಗಿದ್ದಾರೆ.

Comments are closed.