Mangaluru : ಸೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!!

Share the Article

 

Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

 

ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ ತನ್ನ ಮನೆ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು ಮೃತಪಟ್ಟರು.

Comments are closed.