Tamilunadu : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ !!

Share the Article

Tamilunadu : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್‌ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡರಾದ ಅಣ್ಣಾಮಲೈ ಅವರ ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಈ ಹೊಸ ಘೋಷಣೆ ಮಾಡಿದೆ.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದ್ದರು. ಹಾಗೂ ನೈನಾರ್ ನಾಗೇಂದ್ರನ್ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.

Comments are closed.