Murder: ಮೂಗುತಿ ಬಯಲು ಮಾಡಿದ ಕೊಲೆ ರಹಸ್ಯ: ಉದ್ಯಮಿ ಅರೆಸ್ಟ್‌

Murder: ಪತ್ನಿಯ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ ಮಾಡಿದೆ.

ದೆಹಲಿಯಲ್ಲಿ ಸುಮಾರು ಒಂದು ತಿಂಗಳ ಹಿಂದೆ ಚರಂಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಆದರೆ ಈ ಸಾವು ಹೇಗೆ ಸಂಭವಿಸಿತ್ತು ಎಂದು ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆ ಧರಿಸಿದ್ದ ಮೂಗುತ್ತಿ ಪ್ರಮುಖ ಸುಳಿವು ನೀಡಿದೆ.

ಮಾರ್ಚ್ 15 ರಂದು, ದೆಹಲಿಯ ಚರಂಡಿಯಲ್ಲಿ ಬೆಡ್‌ಶೀಟ್‌ನಲ್ಲಿ ಸುತ್ತಿ ಕಲ್ಲು ಮತ್ತು ಸಿಮೆಂಟ್ ಚೀಲಕ್ಕೆ ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಪೊಲೀಸರು ಈ ಮಹಿಳೆಯ ಮೂಗಿನಲ್ಲಿದ್ದ ನತ್ತಿನ ಮೂಲಕ ಮಹಿಳೆ ಯಾರು ಎಂಬುದನ್ನು ಗುರುತಿಸಿದರು. ಅಲ್ಲದೇ ಇದು ಕೊಲೆ ರಹಸ್ಯವನ್ನು ಭೇದಿಸಲು ಅವರಿಗೆ ಸಹಾಯ ಮಾಡಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಮಹಿಳೆಯ ಮೂಗಿನಲ್ಲಿದ್ದ ಮೂಗುತ್ತಿಯನ್ನು ಹಿಡಿದುಕೊಂಡು ಪೊಲೀಸರನ್ನು ದಕ್ಷಿಣ ದೆಹಲಿಯಲ್ಲಿರುವ ಆಭರಣ ಅಂಗಡಿಗೆ ಹೋಗಿದ್ದಾರೆ. ಅಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ, ಗುರುಗ್ರಾಮ್‌ನ ತೋಟದ ಮನೆಯಲ್ಲಿ ವಾಸಿಸುತ್ತಿದ್ದ ದೆಹಲಿಯ ಆಸ್ತಿ ಡೀಲರ್ ಅನಿಲ್ ಕುಮಾರ್ ಅವರು ಆ ಮೂಗುತ್ತಿಯನ್ನು ಖರೀದಿಸಿದ್ದಾರೆ ಎಂಬುದು ತಿಳಿದು ಬಂದಿದೆ. ಈ ಆಭರಣ ಅಂಗಡಿಯಲ್ಲಿ ಮೂಗುತಿ ಖರೀದಿಸಿದ ಬಿಲ್ ಅನ್ನು ಉದ್ಯಮಿ ಹೆಸರಿನಲ್ಲಿ ನೀಡಲಾಗಿದೆ. ಮೃತ ಮಹಿಳೆಯನ್ನು 47 ವರ್ಷದ ಸೀಮಾ ಸಿಂಗ್ ಎಂದು ಗುರುತಿಸಲಾಗಿದೆ.

ಇದಾದ ನಂತರ ಪೊಲೀಸರು ಆರೋಪಿ ಕುಮಾರ್ ಅವರನ್ನು ಸಂಪರ್ಕಿಸಿದಾಗ ಮೃತ ಮಹಿಳೆ ಸೀಮಾ ಸಿಂಗ್ ಅವರ ಪತ್ನಿ ಎಂದು ತಿಳಿದು ಬಂದಿದೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ನಿಮ್ಮ ಪತ್ನಿಯೊಂದಿಗೆ ಮಾತನಾಡಿ ಎಂದು ಆಕೆಗೆ ಹೇಳಿದಾಗ ಅವರು ತಮ್ಮ ಪತ್ನಿ ಫೋನ್ ಇಲ್ಲದೆ ವೃಂದಾವನಕ್ಕೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದು ಪೊಲೀಸರ ತೀವ್ರ ಅನುಮಾನಕ್ಕೆ ಕಾರಣವಾಗಿದೆ.

ನಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೀಮಾ ಪತಿ ಅನಿಲ್ ಹಾಗೂ ಕಾವಲುಗಾರ ಶಿವಶಂಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Comments are closed.