Tamilunadu : ಹಿಂದೂಗಳ ನಾಮ, ತಿಲಕಗಳನ್ನು ಲೈಂಗಿಕ ಕ್ರಿಯೆ ಭಾಗಗಳಿಗೆ ಹೋಲಿಸಿದ ತಮಿಳುನಾಡು ಸಚಿವ

Tamilunadu : ತಮಿಳುನಾಡಿನ ರಾಜ್ಯ ಅರಣ್ಯ ಸಚಿವ ಕೆ. ಪೊನ್ಮುಡಿ, ಹಿಂದೂ ಧಾರ್ಮಿಕ ತಿಲಕಗಳನ್ನು ಲೈಂಗಿಕ ಕ್ರಿಯೆಗೆ ಹೋಲಿಸಿ ಭಾರಿ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರು ನೀಡಿರುವ ಹೇಳಿಕೆಗೆ ಸ್ವತಃ ಡಿಎಂಕೆ ನಾಯಕರು, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ಬೆನ್ನಲ್ಲೇ ಸಚಿವ ಕೆ. ಪೊನ್ಮುಡಿ ಅವರನ್ನು ಶುಕ್ರವಾರ ಪಕ್ಷದ ಪ್ರಮುಖ ಹುದ್ದೆಯಿಂದ ತೆಗೆದುಹಾಕಲಾಗಿದೆ.
என்ன ஒரு கேவலமான ஜென்மம்…
இந்த கருமத்துல இது அமைச்சர்…. pic.twitter.com/XBrR0sPZEY— john ravi. (@johnravi1974) April 10, 2025
ಹೌದು, ಡಿಎಂಕೆ ಸಚಿವ ಪೊನ್ಮುಡಿ ಹಿಂದೂ ಧಾರ್ಮಿಕ ಚಿಹ್ನೆಗಳನ್ನು ಲೈಂಗಿಕ ಭಂಗಿಗಳೊಂದಿಗೆ ಹೋಲಿಕೆ ಮಾಡಿದ್ದರು. ಶೈವ ಮತ್ತು ವೈಷ್ಣವ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಮಾತ್ರವಲ್ಲದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತೋರಿಸುವ ಸಾರ್ವಜನಿಕ ಕಾರ್ಯಕ್ರಮವೊಂದರ ವೀಡಿಯೊ ವೈರಲ್ ಆಗಿತ್ತು.
ಈ ವಿಡಿಯೋಗೆ ವಿಪಕ್ಷಗಳು ಮಾತ್ರವಲ್ಲದೇ ಡಿಎಂಕೆ ಪಕ್ಷದ ಮಹಿಳಾ ನಾಯಕರೇ ತೀವ್ರ ಕಿಡಿಕಾರಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಡಿಎಂಕೆ ನಾಯಕಿ ಕನ್ನಿಮೋಳಿ, ‘ಸಚಿವ ಪೊನ್ಮುಡಿ ಅವರ ಇತ್ತೀಚಿನ ಹೇಳಿಕೆ ಸ್ವೀಕಾರಾರ್ಹವಲ್ಲ. ಪೊನ್ಮುಡಿ ಯಾವುದೇ ಕಾರಣಕ್ಕಾಗಿ ಮಾತನಾಡಿದ್ದರೂ, ಅಂತಹ ಅಸಭ್ಯ ಪದಗಳು ಖಂಡನೀಯ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಬೆನ್ನಲ್ಲೇ ಸಿಎಂ ಸ್ಟಾಲಿನ್ ಅವರು ‘ಪೊನ್ಮುಡಿ ಅವರನ್ನು “ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
Comments are closed.