CET: ಪಿಯುಸಿಯಲ್ಲಿ ಫೇಲ್ ಆದ್ರೂ CET ಬರೆಯಲು ಅವಕಾಶ – KEA ಘೋಷಣೆ

CET: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಕೂಡ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಘೋಷಣೆ ಮಾಡಿದೆ.
ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ–2 ಮತ್ತು ಪರೀಕ್ಷೆ–3 ಬರೆಯಲು ಅವಕಾಶ ಇರುವ ಕಾರಣ ಸಿಇಟಿ ಪರೀಕ್ಷೆ ಬರೆಯಲು ಕೂಡ ಅವಕಾಶ ನೀಡಲಾಗುವುದು. ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ಎಲ್ಲ ವಿದ್ಯಾರ್ಥಿಗಳೂ ಸಿಇಟಿಗೆ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.
ಅಲ್ಲದೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಿಯುಸಿ ವಾರ್ಷಿಕ ಪರೀಕ್ಷೆ-2 ಫಲಿತಾಂಶ ಹೊರಬಿದ್ದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಹಾಗೂ ವಾರ್ಷಿಕ ಪರೀಕ್ಷೆ-2ರ ಪೈಕಿ ಯಾವುದರಲ್ಲಿ ಉತ್ತಮ ಅಂಕ ಬಂದಿರುತ್ತದೆಯೋ ಅದನ್ನು ಪರಿಗಣಿಸಲಾಗುತ್ತದೆ ಎಂದು ಎಚ್ ಪ್ರಸನ್ನ ತಿಳಿಸಿದ್ದಾರೆ.
Comments are closed.