Hubballi : 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ – ಆರೋಪಿ ಪೊಲೀಸರ ಗುಂಡಿಗೆ ಬಲಿ!!

Hubballi: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಕರೆದೊಯ್ದಾಗ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಗುಂಡು ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಗರದ ಹೊರ ವಲಯದ ತಾರಿಹಾಳದ ಕೆಳಸೇತುವೆ ಬಳಿ ನಡೆದಿದೆ.
ಹೌದು, ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಬಾಲಕಿ ಕೊಲೆಗೈದಿದ್ದು ಹೇಗೆ?:
ಪಾಟ್ನಾದ ನಿವಾಸಿಯಾದ ಆರೋಪಿ ರಿತೀಶ ಕುಮಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿ ತಿಂಡಿ ತಿನಿಸುಗಳ ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿ ಹಾಕಿಕೊಂಡು ಎದುರಿನ ಮೆನೆಯಲ್ಲಿರುವ ಶೆಡ್ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಾಲಕಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.
ಇನ್ನು ಬಾಲಕಿ ಕೊಲೆ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂಬ ಸುದ್ದಿ ತಿಳಿಯುತ್ತಿದಂತೆ ಕೆಎಂಸಿಆರ್ ಐ ಆಸ್ಪತ್ರೆ ಎದುರು ಸೇರಿದ್ದ ಜನಸ್ತೋಮ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಪರವಾಗಿ ಜಯಘೋಷ ಕೂಗಿ ಹರ್ಷೋದ್ಘಾರ ವ್ಯಕ್ತಪಡಿಸಿದರು. ಕೆಎಂಸಿಆರ್ ಐ ಆಸ್ಪತ್ರೆಗೆ ವಿಧಾನ ಪರಿಷತ್ ಮುಖ್ಯ ಸಂಚೇತಕ ಸಲೀಂ ಅಹ್ಮದ, ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಇತರೆ ಮುಖಂಡರು ಭೇಟಿ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದರು.
Comments are closed.