Lingasuru: ಯತ್ನಾಳ್ ಭಾಷಣದ ವೇಳೆ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ವ್ಯಕ್ತಿ!!

Lingasuru : ಬಿಜೆಪಿ ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇತ್ತೀಚಿಗೆ ಕೊಲೆ ಬೆದರಿಕೆಯ ಕರೆಗಳು ಬಂದಿದ್ದವು. ಈ ಬೆನ್ನಲ್ಲೇ ಯತ್ನಾಳ್ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ಘಟನೆ ಲಿಂಗಸೂರಿನಲ್ಲಿ ಭಾನುವಾರ ನೆಡದಿದೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆ ಸಂಘಟನೆ ಹಮ್ಮಿಕೊಂಡಿದ್ದ ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಯತ್ನಾಳ್ ಮಾತನಾಡುತ್ತಿದ್ದ ಸಂದರ್ಭದಲ್ಲಿ, ವೇದಿಕೆ ಹಿಂಭಾಗದಿಂದ ಪ್ರವೇಶಿಸಿದ ವ್ಯಕ್ತಿ ತನ್ನ ಬೆನ್ನಲ್ಲಿ ಮಚ್ಚು ಇಟ್ಟುಕೊಂಡಿದ್ದ. ಇದನ್ನು ಗಮನಿಸಿದ ಸಂಘಟನೆ ಕಾರ್ಯಕರ್ತರು ಎಚ್ಚೆತ್ತುಕೊಂಡು ಅವನನ್ನು ಹಿಡಿದು ಸ್ಥಳದಲ್ಲಿದ್ದ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಚ್ಚು ಹಿಡಿದು ಬಂದ ವ್ಯಕ್ತಿ ಹಟ್ಟಿ ಪಟ್ಟಣದ ಶ್ರೀನಿವಾಸ ಎಂದು ಹೇಳಲಾಗುತ್ತಿದೆ. ಆತನನ್ನು ಪಟ್ಟಣದ ಪೊಲೀಸ್ ಠಾಣೆಗೆ ಕರೆತಂದು ಹೆಚ್ಚುವರಿ ಎಸ್‌ಪಿ ಜಿ.ಹರೀಶ ವಿಚಾರಣೆ ನಡೆಸಿದ್ದಾರೆ.
Comments are closed.