Chamarajanagara: 4,500 ಎಕ್ರೆ ಅರಮನೆ ಆಸ್ತಿ ಖಾತೆ ಮಾಡುವ ವಿಚಾರ – ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕುರಿತು ರಾಜಮಾತೆ ಮಹತ್ವದ ಹೇಳಿಕೆ

Chamarajanagara: ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟೀಕರಣ ನೀಡಿದ್ದಾರೆ.
ಹೌದು, ಚಾಮರಾಜನಗರದಲ್ಲಿ (Chamarajanagara) 4,500 ಎಕರೆ ಜಮೀನು ಅರಮನೆಗೆ ಸೇರಿದ್ದು ಎಂಬುದಕ್ಕೆ ದಾಖಲೆ ಇದೆ. ಆದ್ರೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೇ ಜಮೀನು ಬಂದರೂ ನಾವು ಅದನ್ನು ಅವರಿಗೇ ಬಿಟ್ಟು ಕೊಡುವ ವ್ಯವಸ್ಥೆ ಮಾಡ್ತಿವಿ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಹೇಳಿದ್ದಾರೆ.
ಅರಮನೆಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಯಚಾಮರಾಜೇಂದ್ರ ಒಡೆಯರ್ ಅವರು ನೀಡಿರುವ ದಾನದ ಬಗ್ಗೆ ಗೊತ್ತಿಲ್ಲ. ದಾನಪತ್ರ ಹಾಗೂ ದಾಖಲೆಗಳಿದ್ದರೆ ರೈತರು ತಂದುಕೊಡಲಿ. ಮಹಾರಾಜರು ಜಮೀನು ನೀಡಿದ್ದರೆ, ಅದನ್ನು ಕಿತ್ತುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಆ ಕಾಲದಲ್ಲಿ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಮಾತನಾಡಲು ಪ್ರಯತ್ನ ಪಟ್ಟೆ. ದೂರವಾಣಿ ಕರೆ ಮಾಡಿದ್ದೆ ಸ್ವೀಕರಿಸಿಲ್ಲ. ಮೇಸೇಜ್‌ಗೂ ರೀಪ್ಲೆ ಮಾಡಿಲ್ಲ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಖಂಡಿತ ಕೊಡಿ. ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ.
Comments are closed.