Bengaluru: ರಾಜಧಾನಿಯಲ್ಲಿ ಮತ್ತೆ ಮುಸ್ಲಿಂ ಮಹಿಳೆ ಮೇಲೆ ನೈತಿಕ ಪೊಲೀಸ್ ಗಿರಿ!!

Share the Article

Bengaluru : ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವತಿ, ಹಿಂದೂ ಯುವಕನ ವಿಡಿಯೋ ಮಾಡಿ ಹಲ್ಲೆ ಮುಂದಾಗಿರುವ ಘಟನೆ ನಡೆದಿದೆ.

ಹೌದು, ಪಾರ್ಕೊಂದರಲ್ಲಿ ಮುಸ್ಲಿಂ ಯುವತಿ, ಹಿಂದೂ ಯುವಕ ಕುಳಿತಿದ್ದಾಗ ಅವರ ಬಳಿಗೆ ಬಂದ ಯುವಕರ ತಂಡವೊಂದು, ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’ ಎನ್ನುತ್ತ ವಿಡಿಯೋ ರೆಕಾರ್ಡ್ ಮಾಡಲು ಶುರು ಮಾಡಿದೆ. ದಯವಿಟ್ಟು ಗಲಾಟೆ ಮಾಡಬೇಡಿ ಎಂದು ಯುವತಿ ಬೇಡಿಕೊಂಡಿದ್ದರೂ ಬಿಡದೆ, ‘ಕಮಿಟಿಯವರು ಬರ್ತಾರೆ ಇರು’ ಎಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಸದ್ಯ ಈ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಎಲ್ಲಿ ನಡೆದಿದೆ. ಯಾವಾಗ ನಡೆದಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Comments are closed.