Andhra Pradesh: ಕತ್ತು ಹಿಸುಕಿ 8 ತಿಂಗಳ ಗರ್ಭಿಣಿಯ ಕೊಂದ ಪತಿ!

Share the Article

Andhra Pradesh: ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು ಸಿಟ್ಟಿನಲ್ಲಿ 8 ತಿಂಗಳ ಗರ್ಭಿಣಿಯನ್ನು ಗಂಡ ಕತ್ತು ಹಿಸುಕಿ ಕೊಂದ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಶಾಖಪಟ್ಟಣಂನ (Visakhapatnam) ಪಿಎಂ ಪಾಲೆಂನ ಉಡಾ ಕಾಲೋನಿಯಲ್ಲಿ ಘಟನೆ ನಡೆದಿದೆ.

ಅನುಷಾ (27) ಮೃತ ಪತ್ನಿ.

ಸೋಮವಾರ ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ನಂತರ ಹೆಚ್ಚಾಗಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವಿಗೀಡಾಗಿದ್ದಾಳೆ.

ಆರೋಪಿ ಪತಿ ನಗರದ ಸೌಟ್ಸ್ ಮತ್ತು ಸಾಗರ್‌ನಗರ ವೀಕ್ಷಣಾ ಕೇಂದ್ರದ ಬಳಿ ಫಾಸ್ಟ್ ಫುಡ್ ಸೆಂಟ‌ರ್ ನಡೆಸುತ್ತಿದ್ದರು. ಮೂರು ವರ್ಷಗಳ ಹಿಂದೆ ಅನುಷಾಳ ಜೊತೆ ಪ್ರೇಮ ವಿವಾಹವಾಗಿದ್ದರು. ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ಘಟನೆಯ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

Comments are closed.