Admission rule: ಒಂದನೇ ತರಗತಿಗೆ ಸೇರಿಸಲು ಮಕ್ಕಳ ವಯೋಮಿತಿ ಸಡಿಲ, ಆದ್ರೆ…!! ಗುಡ್ ನ್ಯೂಸ್ ಕೊಟ್ಟು ಶಾಕ್ ನೀಡಿದ ಮಧು ಬಂಗಾರಪ್ಪ

Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಈ ನಿಯಮದ ಕುರಿತಾಗಿ ಹೊಸದಾಗಿ ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಪೋಷಕರಿಗೆ ಶಿಕ್ಷಣ ಸಚಿವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದ್ದಾರೆ.
ಈ ಕುರಿತಾಗಿ ಮಾತನಾಡಿದ ಸಚಿವರು ‘ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು’ ಎಂದು ಸ್ಪಷ್ಟಪಡಿಸಿದರು.
ಅಲ್ಲದೆ ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
Comments are closed.