Crime: ICU ನಲ್ಲಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

Share the Article

Crime: ಐಸಿಯುನಲ್ಲಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮನೆಗೆ ಬಂದ ಬಳಿಕ ಯುವತಿ ತನ್ನ ಗಂಡನಿಗೂ ಈ ವಿಷಯ ತಿಳಿಸಿದ್ದು, ನಂತರ ದಂಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಎ.13 ಕ್ಕೂ ಮುನ್ನ ಈ ಘಟನೆ ನಡೆದಿದೆ.

ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯು ಹೋಟೆಲ್ ಒಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದ ಪರಿಣಾಮ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದರು.

ಈ ಕುರಿತು ಸದರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಆರೋಪಿಯ ಬಂಧನಕ್ಕೆ ತನಿಖೆ ನಡೆಸಲಾಗುತ್ತಿದೆ.

Comments are closed.