Karnataka: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಪ್ರಿಯಾಂಕ್ ಖರ್ಗೆ

Karnataka: ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಜ್ಜಾಗಿದೆ.
ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಯೋಜನಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜಾನಪದ ಗೀತೆಗಳು – ಕಥೆಗಳು, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.
Comments are closed.