SSLC ರಿಸಲ್ಟ್ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಮಧು ಬಂಗಾರಪ್ಪ!!

SSLC: ರಾಜ್ಯದಲ್ಲಿ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿತ್ತು. ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು, ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಹೀಗಿರುವಾಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಸ್ ಎಸ್ ಎಲ್ ಸಿ ರಿಸಲ್ಟ್ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ.
ಇನ್ನು ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.
Comments are closed.