Mangaluru: ಸಾಮೂಹಿಕ ಅತ್ಯಾಚಾರ ಪ್ರಕರಣ – 24 ಗಂಟೆಗಳಲ್ಲಿ ಮೂವರ ಬಂಧನ

Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ಈ ಬೆನ್ನಲ್ಲೇ ಕೇವಲ 24 ಗಂಟೆಯಲ್ಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೌದು, ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ( Ullal Police ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು.
ಮಂಗಳೂರಿನಲ್ಲಿ ಪರಿಚಯವಾದ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಾರೆ. ಆದರೆ, ವೈದ್ಯಕೀಯ ವರದಿ ಬಂದ ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆಯೋ ಅಥವಾ ಇಲ್ಲವೋ ಎಂಬುವುದು ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Comments are closed.