Muslim Reservation: ಮುಸ್ಲಿಮರಿಗೆ ಗುತ್ತಿಗೆ- ರಾಜ್ಯಪಾಲರ ತಕರಾರು

Share the Article

Muslim Reservation: ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರಕಾರದ ತೀರ್ಮಾನಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ತಕರಾರು ಎತ್ತಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿದ್ದಾರೆ.

ವಿಧಾನ ಮಂಡಲದ ಎರಡೂ ಸದನಗಳು ಅಂಗೀಕಾರ ಮಾಡಿದ ಈ ಮಸೂದೆಯನ್ನು ಎಪ್ರಿಲ್‌ 1 ರಂದು ರಾಜ್ಯಪಾಲರ ಅಂಕಿತಕ್ಕೆ ಸರಕಾರ ಕಳುಹಿಸಿತ್ತು. ಆರು ಪುಟಗಳ ಪತ್ರದ ಜೊತೆಗೆ ಪೂರ್ಣ ಕಡತವನ್ನು ಮಂಗಳವಾರ (ಎ.15) ಹಿಂದಿರುಗಿಸಿದ ಅವರು, ʼಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲʼ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Comments are closed.