Shivamogga: ರೂ.5000 ಫೀಸ್‌ ಕಟ್ಟದ 3 ನೇ ಕ್ಲಾಸ್‌ ಮಗು ಕೂದಲಿಗೆ ಕತ್ತರಿ!

Share the Article

Shivamogga: ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗುವೊಂದು ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿ ಮಗುವಿನ ಮುಂದಲೆಯ ಕೂದಲನ್ನು ಕತ್ತರಿಸಲಾಗಿದೆ ಎಂದು ಚಿತ್ರದುರ್ಗ ಛಲವಾದಿ ಪೀಠದ ಬಸವನಾಗಿದೇವ ಸ್ವಾಮೀಜಿ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಕಿ ಶುಲ್ಕ ₹5000 ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಪರೀಕ್ಷೆ ಬರೆಯುವುದಕ್ಕೂ ಅವಕಾಶ ನೀಡದೆ ಮಗುವಿನ ಭವಿಷ್ಯವನ್ನು ಖಾಸಗಿ ಶಾಲೆ ಹಾಳು ಮಾಡಿದೆ. ಅಲ್ಲದೇ ಮಗುವಿನ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದು, ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಇಲಾಖೆಯ ಅಧಿಕಾರಿಗಳಿಗೂ ತಿಳಿಸಲಾಗಿದೆ.” ಆದರೆ, ತನಿಖೆಯಲ್ಲಿ ಅಧಿಕಾರಿಗಳು ಸಾಕ್ಷಿ ನಾಶ ಮಾಡುವ ಮೂಲಕ ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಸಂಚು ನಡೆದಿದೆ ಎಂದು ಬಸವನಾಗಿದೇವ ಸ್ವಾಮೀಜಿ ತಿಳಿಸಿರುವ ಕುರಿತು ವರದಿಯಾಗಿದೆ.

Comments are closed.