Waqf Bill: ‘ವಕ್ಫ್ ತಿದ್ದುಪಡಿ ಮಸೂದೆ’ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ!!

Waqf bill: ಹಲವು ವಿವಾದ ಹಾಗೂ ವಿರೋಧಗಳ ನಡುವೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಬಹುಮತಗಳಿಂದ ಅಂಗೀಕಾರ ಕೂಡ ಆಗಿದೆ. ಆದರೆ ಈ ಬೆನ್ನಲ್ಲೇ ಕೆಲವು ರಾಜ್ಯಗಳು ತಾವು ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಘೋಷಿಸಿದೆ. ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿದೆ. ಅಲ್ಲದೆ “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.
ಜೊತೆಗೆ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್‌ಗೆ ರೂಪಿಸಲಾಗಿರುವ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಒಡ್ಡಿದೆ.
Comments are closed.