Hasana: ಹಾಸನ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!

Share the Article

Hasana: ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ (hasana) ಜಿಲ್ಲೆ ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.

ಹಳೇಪಾಳ್ಯ ಗ್ರಾಮದ ರಕ್ಷಿತಾ ಮೂರು ವರ್ಷದ ಹಿಂದೆ ಅದೇ ಗ್ರಾಮದ ಪುನೀತ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಆದರೆ ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆಲೂರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.