Puttur: ಪುತ್ತೂರು ಮಹಾಲಿಂಗೇಶ್ವರನ ಜಾತ್ರಾ ಬ್ರಹ್ಮರಥೋತ್ಸವ! ಲಕ್ಷಾಂತರ ಮಂದಿ ಭಕ್ತರ ಲಗ್ಗೆ!

Puttur: ಇತಿಹಾಸ ಪ್ರಸಿದ್ದ ಮಹತೋಭಾರ ಒಡೆಯ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಗುರುವಾರ ರಾತ್ರಿ ಭಕ್ತಿ ಸಂಭ್ರಮದೊದಿಗೆ ವೈಭವಯುತವಾಗಿ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡರು.
ಜೊತೆಗೆ `ಪುತ್ತೂರು ಬೆಡಿ’ ಎಂದೇ ಪ್ರಖ್ಯಾತಿ ಪಡೆದಿರುವ ಸುಡುಮದ್ದು ಪ್ರದರ್ಶನವು ಬಾನಂಗಳದಲ್ಲಿ ವರ್ಣ ಚಿತ್ತಾರ ಮೂಡಿಸಿತ್ತು.
ಏ.17ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ಉತ್ಸವ, ಕಟ್ಟೆಪೂಜೆ, ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಂಜೆ ದೇವರ ಮತ್ತು ಉಳ್ಳಾಲ್ತಿ ಅಮ್ಮನವರ ಉತ್ಸವ ನಡೆಯಿತು. ಬಳಿಕ ಬ್ರಹ್ಮರಥದ ಬಳಿ ಕಾಜುಕುಜುಂಬ ದೈವದ ನುಡಿಕಟ್ಟು ನಡೆದು ದೇವರು ರಥಾರೂಢರಾದರು. ಬಳಿಕ ಪುತ್ತೂರು ಬೆಡಿ ಆರಂಭಗೊಂಡಿತು.
ಸುಮಾರು 1 ಗಂಟೆ ಕಾಲ ಸುಡುಮದ್ದು ಪ್ರದರ್ಶನ ನಡೆದು ರಾತ್ರಿ ವೇಳೆ ಬ್ರಹ್ಮರಥೋತ್ಸವ ನಡೆಯಿತು. ಬಳಿಕ ಬ್ರಹ್ಮರಥದಿಂದ ಇಳಿದ ದೇವರು ಬಂಗಾರ್ ಕಾಯರ್‌ಕಟ್ಟೆ ಸವಾರಿಯ ಬಳಿಕ ಅಂಕೆತ್ತಿಮಾರ್ ಕಟ್ಟೆಯಲ್ಲಿ ಕಟ್ಟೆ ಪೂಜೆ ಸ್ವೀಕರಿಸಿ ದಂಡ ನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಬೀಳ್ಕೊಡುಗೆಯ ಬಳಿಕ ದೇವಳದ ಒಳಗೆ ಪ್ರವೇಶ, ಶಯನ ನಡೆಯಿತು.
Comments are closed.