Shivamogga: CET ಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್!!

Shivamogga: ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಹೌದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ, ಅಧಿಕಾರಿಗಳು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ (CET 2025) ಸಂಬಂಧಿಸಿದಂತೆ ಬ್ರಾಹ್ಮಣ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಂಡಿದೆ. ಶಿವಮೊಗ್ಗದಲ್ಲಿ ಈ ಪ್ರಕರಣಕ್ಕೆ ಕಾರಣವಾದ ಅಧಿಕಾರಿ ಸಸ್ಪೆಂಡ್ ಆಗಿದ್ದಾರೆ.
ಮಧು ಬಂಗಾರಪ್ಪ (Education minister Madhu Bangarappa) ಪ್ರತಿಕ್ರಿಯಿಸಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
Comments are closed.