Karnataka: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ!

Karnataka: ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜ್ಯೋತಿ ಬೆಳಗಿ ಚಾಲನೆ ನೀಡಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ
ಬಳಿಕ ಮಾತನಾಡಿದ ಶಾಸಕರು ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟವು ಪ್ರತೀ ತಿಂಗಳು ನಡೆಯುವಂತಾಗಬೇಕು ಎಂದು ಸಲಹೆ ಮಾಡಿದರು.
ಸರ್ಕಾರಿ ನೌಕರರು ಪ್ರತೀ ನಿತ್ಯ ಕಚೇರಿ ಹಾಗೂ ಕುಟುಂಬದ ಒತ್ತಡ ನಡುವೆ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯ ಹಾಗೂ ಮನಃಶಾಂತಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಸಿ.ಅರುಣ್ ಕುಮಾರ್ ಅವರು ಮಾತನಾಡಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದ್ದು, ಅಗತ್ಯ ಸಹಕಾರ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿಯೇ ಶಾಸಕರ ನಿಧಿಯಿಂದ 5 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಡಾ.ಮಂತರ್ ಗೌಡ ಅವರು ಪ್ರಕಟಿಸಿದರು.
Comments are closed.