Belthangady: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ನಾಳೆ ಉದ್ಘಾಟನೆ!

Belthangady: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಎ.20 (ನಾಳೆ) ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ.
ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸುವರು. ಡಾ.ಹೇಮಾವತಿ ವಿ.ಹೆಗ್ಗಡೆ ಮತ್ತು ಡಿ.ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.
ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪ ಸಿಂಹ ನಾಯಕ್ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
Comments are closed.