CET Exam: ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು-ಕೆಇಎ ಕ್ಷಮೆಯಾಚನೆ!

CET Exam: ಸಿಇಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ʼಎಲ್ಲ ಜಾತಿ ಧರ್ಮಗಳ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದಾರೆ. ನಾವು ಒಂದು ಧರ್ಮವನ್ನು ಗುರಿಯಾಗಿಸಿ ಮಾರ್ಗಸೂಚಿ ನೀಡಿಲ್ಲ. ಯಾವುದೋ ಗೇಟ್‌ನಲ್ಲಿದ್ದ ಒಬ್ಬ ಸಿಬ್ಬಂದಿ ವರ್ತನೆಯಿಂದ ಒಂದು ಸಮಾಜಕ್ಕೆ ನೋವಾಗಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ನಾವು ಯಾರನ್ನೂ ಗುರಿ ಮಾಡಿಲ್ಲʼ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಯಾವುದೇ ವಸ್ತ್ರಸಂಹಿತೆಯಲ್ಲಿ ಜನಿವಾರ ತೆಗೆಯುವ ಉಲ್ಲೇಖ ಮಾಡಿಲ್ಲ. ಈ ಕುರಿತು ಸಮಗ್ರ ತನಿಖೆ ಮಾಡಲಾಗುವುದು. ಕೆಳ ಹಂತದ ಸಿಬ್ಬಂದಿ ತಪ್ಪೆಸಗಿದ್ದರೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಉನ್ನತ ಮಟ್ಟದ ಅಧಿಕಾರಿಗಳಿಂದ ಲೋಪವಾಗಿದ್ದರೆ ಪ್ರಾಧಿಕಾರವು ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಸನ್ನ ಹೇಳಿದ್ದಾರೆ.
Comments are closed.