BJP: ರಾಜ್ಯ ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ !!

Share the Article

BJP: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಗಿ ಅಸಮಾಧಾನಗೊಂಡು ಬಿಜೆಪಿಯ ಚಟುವಟಿಕೆಗಳಿಂದ ದೂರ ಇದ್ದರು. ಇದೀಗ ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿದ್ದು, ಇನ್ಮುಂದೆ ತಾವು ಪರಿಸರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

Comments are closed.