Fake Doctor: ರಾಜ್ಯದಲ್ಲಿ ಒಂದೇ ವರ್ಷಕ್ಕೆ 967 ನಕಲಿ ವೈದ್ಯರ ಪತ್ತೆ!!

Share the Article

Fake Doctor: ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರವು ಇದೀಗ ಒಂದೇ ಒಂದು ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 967 ನಕಲಿ ವೈದ್ಯರನ್ನು ಪತ್ತೆ ಮಾಡಿದೆ.

ನಕಲಿ ವೈದ್ಯರ ಕ್ಲಿನಿಕ್‌ಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಹೀಗಾಗಿ ಈ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು ಕೈಗೊಂಡ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಒಂದು ವರ್ಷದಲ್ಲಿ 967 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿಸಿದೆ.

ಇದೀಗ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚಿರುವ ವಿವರಗಳನ್ನು ಹಂಚಿಕೊಂಡಿದೆ. ಬೀದರ್ ಜಿಲ್ಲೆ ಒಂದರಲ್ಲೇ 213 ಮಂದಿ ಪತ್ತೆಯಾಗಿದ್ದಾರೆ. ಒಟ್ಟು 442 ಮಂದಿ ನಕಲಿ ವೈದ್ಯರಿಗೆ ನೋಟಿಸ್ ನೀಡಿ 163 ಕ್ಲಿನಿಕ್‌ಗಳನ್ನು ಈಗಾಗಲೇ ಮುಚ್ಚಿಸಲಾಗಿದೆ. 67 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.