Udupi: ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸೋದು ಕಡ್ಡಾಯ : ಉಡುಪಿ ಡಿಸಿ

Udupi: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭವಾಗಿದ್ದು ಜೂನ್ ನಾಲ್ಕರವರೆಗೆ ನಡೆಯಲಿದ್ದು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಕೃಷಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಪು, ಉಡುಪಿ (udupi) , ಹೆಬ್ರಿ, ಕುಂದಾಪುರ, ಬ್ರಹ್ಮಾವರ ಪಾಲಿ ಕ್ಲಿನಿಕ್ ನಲ್ಲಿ ತಲಾ ಒಂದರಂತೆ ಎಂಟು ಪಶು ಸಂಜೀವಿನಿ ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಲಸಿಕೆ ಹಾಕಿಸಲು ಯಾವುದೇ ರೀತಿಯ ತೊಂದರೆಯಿಲ್ಲ. ಜಾನುವಾರುಗಳ ಬಗ್ಗೆ ನಿರ್ಲಕ್ಷ್ಯ ವಹಿಸದೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಡಿಸಿ ಆದೇಶ ನೀಡಿದ್ದಾರೆ.
Comments are closed.